ಪ್ರಮುಖ ಸುದ್ದಿಮೈಸೂರು

ಡಾ. ನಿರಂಜನ ವಾನಳ್ಳಿ ಅವರಿಗೆ ರಾಷ್ಟ್ರೀಯ ಪುರಸ್ಕಾರ

ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ನಿರಂಜನ ವಾನಳ್ಳಿ ಅವರು ನಿರ್ದೇಶಿಸಿರುವ ಲೈಲಾ ಗೋಲ್ಡ್ ಕಿರು ಚಿತ್ರ ರಾಷ್ಟ್ರೀಯ ಪುರಸ್ಕಾರವನ್ನು ತನ್ನದಾಗಿಸಿಕೊಂಡಿದೆ.

ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯ ಪಂಚಾಯತ್ ರಾಜ್ ಸಂಸ್ಥೆಗಳ ಕುರಿತು ಆಯೋಜಿಸಿದ್ದ ಕಿರುಚಿತ್ರಗಳ ಸ್ಪರ್ಧೆಯಲ್ಲಿ ಲೈಲಾಗೋಲ್ಡ್ ಚಿತ್ರ ಪ್ರಥಮ ಸ್ಥಾನ ಪಡೆದಿದ್ದು, ಪುರಸ್ಕಾರವು 7.50 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ಡಾ. ನಿರಂಜನ ವಾನಳ್ಳಿ ಅವರಿಗೆ ಪ್ರದಾನ ಮಾಡಲಾಯಿತು. ನಿರಂಜನ ವಾನಳ್ಳಿ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರು.

Leave a Reply

comments

Related Articles

error: