ಪ್ರಮುಖ ಸುದ್ದಿ

ರೋಹಿಣಿ ಸಿಂಧೂರಿಯವರ ಮೇಲಿನ ಆರೋಪದಲ್ಲಿ ಸತ್ಯಾಂಶವಿಲ್ಲ : ಆಯೋಗಕ್ಕೆ ವರದಿ : ಸಚಿವ ಮಂಜುಗೆ ಮುಖಭಂಗ

ರಾಜ್ಯ(ಹಾಸನ)ಏ.14:- ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸ ಅವರು ಸಚಿವ ಎ. ಮಂಜು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮೇಲೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದಾರೆ.

ಇದರಿಂದ ಸಚಿವ ಎ.ಮಂಜು ಅವರಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರೀ ಹಿನ್ನಡೆಯುಂಟಾಗಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿ ಸಚಿವರು ಸರ್ಕಾರಿ ಕಾರು ಬಳಸಿದ್ದಕ್ಕೆ ಎಫ್ ಐ ಆರ್ ದಾಖಲಿಸಿದ್ದರು. ಇದರಿಂದ ಸಚಿವರು ಜಿಲ್ಲಾಧಿಕಾರಿಗಳು ದುರುದ್ದೇಶದಿಂದ ನನ್ನ ಮೇಲೆ ಎಫ್ ಐ ಆರ್ ದಾಖಲಿಸಿದ್ದಾರೆ. ಅದಕ್ಕಾಗಿ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದೀಗ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ವರದಿ ನೀಡಲಾಗಿದ್ದು, ಸಚಿವ ಮಂಜು ಅವರಿಗೆ ಮುಖಭಂಗವಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: