ದೇಶ

ನೇಪಾಳದ ಭಾರತೀಯ ರಾಯಭಾರಿ ಕಚೇರಿ ಮುಂಭಾಗ ಬಾಂಬ್ ಸ್ಫೋಟ

ನೇಪಾಳ,ಏ.17-ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನೇಪಾಳ ರಾಜಧಾನಿ ಕಠ್ಮಂಡುವಿನ ವಿರಾಟ್ ನಗರದಲ್ಲಿ ನಡೆದಿದೆ.

ಈ ಘಟನೆಯಲ್ಲಿ ಕಟ್ಟಡದ ಮುಂಭಾಗದಲ್ಲಿದ್ದ ಗೋಡೆ ಹಾನಿಗೊಂಡಿದೆ ಎಂದು ಮೊರಂಗ್ ಎಸ್ಪಿ ಅರುಣ್ ಕುಮಾರ್ ಬಿಸಿ ಹೇಳಿದ್ದಾರೆ. ಈ ವೇಳೆ ಯಾವುದೇ ಸಾವು ನೋವು ಸಂಭವಿಸಿಲ್ಲ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಕೆಲ ಸ್ಥಳೀಯ ಗುಂಪುಗಳು ಬಾಂಬ್ ಸ್ಫೋಟಿಸಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿರುವ ಹಿನ್ನೆಯೆಲ್ಲಿ ಸ್ತಳದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಇದೀಗ ಭಾರತೀಯ ಅಧಿಕಾರಿಗಳು ನೇಪಾಳ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: