ಪ್ರಮುಖ ಸುದ್ದಿ

ಹಾಸನ ಡಿಸಿಯಾಗಿ ಕೂಡಲೇ ಅಧಿಕಾರ ಸ್ವೀಕರಿಸುವಂತೆ ಡಿ.ರಂದೀಪ್ ಅವರಿಗೆ ಆದೇಶ: ರೋಹಿಣಿ ಸಿಂಧೂರಿಗೆ ಹಿನ್ನೆಡೆ

ರಾಜ್ಯ(ಹಾಸನ)ಏ.17:- ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹಿನ್ನಡೆಯಾಗಿದೆ. ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಸಿಎಟಿ ಎತ್ತಿ ಹಿಡಿದಿದೆ. ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಅಸ್ತು ಎಂದಿದೆ. ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ  ರಂದೀಪ್’ರನ್ನು ಹಾಸನ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಕೂಡಲೇ ಅಧಿಕಾರ ವಹಿಸಿಕೊಳ್ಳುವಂತೆ ಸಿಎಟಿ ಸೂಚನೆ ನೀಡಿದೆ. ಈ ಹಿಂದೆ ಉದ್ಯೋಗ, ತರಬೇತಿ ಕೇಂದ್ರದ ನಿರ್ದೇಶಕರಾಗಿ ಸಿಂಧೂರಿಯವರನ್ನು ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ತೆರಳುವಂತೆ ಸಿಎಟಿ ಸೂಚನೆ ನೀಡಿದೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: