ಪ್ರಮುಖ ಸುದ್ದಿಮೈಸೂರು

ಬದಾಮಿ ಸ್ಪರ್ಧೆಯ ಕುರಿತು ರಹಸ್ಯ ಬಿಟ್ಟುಕೊಡದ ಸಿಎಂ ಸಿದ್ದರಾಮಯ್ಯ

ಮೈಸೂರು,ಏ.19:- ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಷ್ಟೇ ಅಲ್ಲದೇ ಬದಾಮಿಯಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಗುತ್ತಿಲ್ಲ.  ಬಾದಾಮಿ ಸ್ಪರ್ಧೆಯ ಕುರಿತು ಸಿಎಂ ರಹಸ್ಯ ಬಿಟ್ಟು ಕೊಡುತ್ತಿಲ್ಲ. ಅವರನ್ನು ಈ ಕುರಿತು ಪ್ರಶ್ನಿಸಿದರೆ ತಾನು ಚಾಮುಂಡೇಶ್ವರಿಯಲ್ಲಿ ಮಾತ್ರ ಸ್ಪರ್ಧಿಸುವುದಾಗಿ ಹೇಳುತ್ತಿದ್ದು, ಬಿ.ಫಾರಂ ಮಾತ್ರ ಕೊಡಲು ಬಿಡುತ್ತಿಲ್ಲ ಎನ್ನಲಾಗಿದೆ.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ರಹಸ್ಯ ಸಭೆಯೊಂದನ್ನು ನಡೆಸಿದ್ದು, ಸಭೆಯಲ್ಲಿ ಕೆಪಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ಡಿಕೆಶಿ, ಬದಾಮಿ ಹಾಲಿ ಶಾಸಕ ಚಿಮ್ಮನಕಟ್ಟಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಇನ್ನೂ ಅಭ್ಯರ್ಥಿಗಳ ಆಯ್ಕೆಯಾಗದ ನಾಲ್ಕು ಕ್ಷೇತ್ರಗಳ ಕುರಿತು ಚರ್ಚೆ ನಡೆಸಿದ್ದು, ನಾನು ಬದಾಮಿಯಲ್ಲಿ ಸ್ಪರ್ಧಿಸಿದರೆ ನಿನಗೆ ಟಿಕೇಟ್ ಇಲ್ಲ ಎಂದು ಚಿಮ್ಮನಕಟ್ಟಿಯವರಿಗೆ ಹೇಳಿದ್ದು, ಶಾಕ್ ನೀಡಿದ್ದಾರಂತೆ. ನಿನ್ನೆ ತಡರಾತ್ರಿ ಸಭೆ ನಡೆದಿದ್ದು, ಸಭೆಯ ಬಳಿಕ ನಾಯಕರು ರಾತ್ರಿಯೇ ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ. ಇಂದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: