ಮೈಸೂರು

ರೋಡ್ ಶೋ ಮೂಲಕ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಎಂ.ಅಶ್ವಿನ್ ಕುಮಾರ್

ಮೈಸೂರು,ಏ.20:- ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಅಶ್ವಿನ್ ಕುಮಾರ್ ಪಟ್ಟಣದ ಶ್ರೀ ಗುಂಜಾನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಸಾವಿರಾರು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ  ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಉರಿವ ಬಿಸಿಲನ್ನೂ ಲೆಕ್ಕಿಸದೇ ತಮ್ಮ ನೆಚ್ಚಿನ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗಾಗಿ ದೇವಾಲಯದ ಆವರಣದಲ್ಲಿ ಅಭಿಮಾನಿಗಳು ಕಾದು ಕುಳಿತಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ  ತಮ್ಮ ಸಾವಿರಾರು ಕಾರ್ಯಕರ್ತರ ಜೊತೆ ರೋಡ್ ಶೋ ಮೂಲಕ ಚುನಾವಣಾ ಕಚೇರಿಗೆ ತೆರಳಿದ ಅಭ್ಯರ್ಥಿ ಅಶ್ವಿನ್ ಕುಮಾರ್ ಚುನಾವಣಾಧಿಕಾರಿಗಳಿಗೆ  ನಾಮಪತ್ರ ಸಲ್ಲಿಸಿದ್ದಾರೆ. ಅಭಿಮಾನಿಗಳು ದಾರಿಯುದ್ದಕ್ಕೂ ತಮ್ಮ ಅಭ್ಯರ್ಥಿ ಪರ ಜೈಕಾರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: