ಪ್ರಮುಖ ಸುದ್ದಿಮೈಸೂರು

ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಮೈಸೂರು,ಏ.20:- ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ, ಸ್ವಗ್ರಾಮ ಸಿದ್ದರಾಮನಹುಂಡಿಗೆ ಭೇಟಿ ನೀಡಿದರು.

ಗ್ರಾಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಸಿದ್ದರಾಮನ ಹುಂಡಿ ಗ್ರಾಮಸ್ಥರು ಭರ್ಜರಿ ಸ್ವಾಗತ ಕೋರಿದರು. ಸಿದ್ದರಾಮಯ್ಯ ಹಾಗೂ ಪುತ್ರ ಯತಿಂದ್ರಾ ಅವರಿಗೆ ಮಹಿಳೆಯರು ಬೆಲ್ಲದ ಆರತಿ ಮಾಡಿದರು. ಸಿಎಂ ಸಿದ್ದರಾಮಯ್ಯ ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಮಟೆ ಬಾರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಗುಲಾಬಿ ಹಾರ ಹಾಗೂ ಪೇಟ ತೊಡಿಸಿ ತಂದೆ-ಮಗನಿಗೆ ಶುಭ ಹಾರೈಸಿದರು. ಸಹೋದರರಾದ ರಾಮೇಗೌಡ ಸಿದ್ದೇಗೌಡರ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಮನೆ ದೇವರ ಪೂಜೆ ಕಾರ್ಯಕದಲ್ಲಿ ಪಾಲ್ಗೊಂಡರು.

ಸಿದ್ದರಾಮನ ಹುಂಡಿಯಿಂದ ನೇರವಾಗಿ  ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕೋಟೆ ಆಂಜನೇಯ ದೇವಾಲಯದಲ್ಲಿ ಪೂಜೆ  ಸಲ್ಲಿಸಲಿರುವ ಸಿಎಂ ಸಿದ್ದರಾಮಯ್ಯ ಬಳಿಕ ಮೆರವಣಿಗೆ ಮೂಲಕ ತಾಲೂಕು ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್  ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಮಂಜುಳಾ ಮಾನಸ, ಸಿಎಂ ಆಪ್ತ ಮರಿಗೌಡ  ಮತ್ತಿತರರು ಉಪಸ್ಥಿತರಿದ್ದರು. ನಂಜನಗೂಡು ತಾಲೂಕು ಕಚೇರಿಯಲ್ಲಿ ಯತೀಂದ್ರ ಸಿದ್ದರಾಮಯ್ಯ  ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ದೃವನಾರಾಯಣ್, ಸಚಿವ ಹೆಚ್.ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಉಪಸ್ಥಿತರಿದ್ದರು. ಇದೇ ವೇಳೆ ತಾಲೂಕು ಕಛೇರಿಗೆ ತೆರಳಿದ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಜಿ.ಟಿ.ದೇವೇಗೌಡ ಪತ್ನಿ ಮತ್ತು ಬೀರಿಹುಂಡಿ ಬಸವಣ್ಣ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: