ಮೈಸೂರು

ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಸಾ.ರಾ.ಮಹೇಶ್

ಮೈಸೂರು,ಏ.23-ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾಸಕ ಸಾ.ರಾ.ಮಹೇಶ್ ಸೋಮವಾರ ಕೆ.ಆರ್.ನಗರ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಅವರ ಪತ್ನಿಯೊಂದಿಗೆ ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಜೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಜನರು ನಿರ್ಧಾರ ಮಾಡಿದ್ದಾರೆ. ಅವರು ಮಾಡಿರುವ ಉತ್ತಮ ಕೆಲಸಗಳು, ಪಕ್ಷಕ್ಕಾಗಿ, ಜನರಿಗಾಗಿ ನಾವು ಮಾಡಿರುವ ಕೆಲಸಗಳು ಈ ಬಾರಿಯ ಚುನಾವಣೆಯಲ್ಲಿ ನಾನು ಗೆಲ್ಲುವಂತೆ ಮಾಡುತ್ತದೆ. ಜನರು ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಾ.ರಾ.ಮಹೇಶ್ ಬೆಂಬಲಿಗರು ಇದ್ದರು. (ಕೆ.ಎಸ್, ಎಂ.ಎನ್)

Leave a Reply

comments

Related Articles

error: