ಮೈಸೂರು

ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದಿಂದ ಡಾ.ಎಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ

ಮೈಸೂರು,ಏ.23-ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೋಮವಾರ ನಾಮಪತ್ರ ಸಲ್ಲಿಸಿದರು.

ಮಹದೇವಪ್ಪ ಅವರು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಪಟ್ಟಣದ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತಿ.ನರಸೀಪುರ ಚುನಾವಣಾಧಿಕಾರಿ ಎಂ.ಎನ್.ಮಂಜುನಾಥ್ ರವರಿಗೆ ನಾಮಪತ್ರ ಸಲ್ಲಿಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ತಮ್ಮ 3 ಸಾವಿರಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ರೋಡ್ ಷೋ ಮೂಲಕ ತೆರಳಿದ ಮಹದೇವಪ್ಪ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಸುನೀಲ್ ಬೋಸ್, ಮುಖಂಡರಾದ ಬನ್ನೂರು ಕೃಷ್ಣಪ್ಪ, ನಿಲಸೋಗೆ ಪುಟ್ಟಬಸವಯ್ಯ, ಸುಧಾ ಮಹದೇವಯ್ಯ, ಜಿ.ಪಂ.ಸದಸ್ಯ ಟಿ.ಎಚ್.ಮಂಜುನಾಥ್, ಬನ್ನೂರು ಪದ್ಮನಾಭ್ ಇತರರು ಇದ್ದರು. (ಕೆ.ಎಸ್, ಎಂ.ಎನ್)

Leave a Reply

comments

Related Articles

error: