
ಅಸ್ಸಾಂ,ಏ.24: ಸೇನಾ ಜೀಪ್ ಗಸ್ತು ತಿರುಗುತ್ತಿದ್ದ ವೇಳೆ ನದಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಅರುಣಾಚಲ ಪ್ರದೇಶ ಹಾಗೂ ಆಸ್ಸಾಂ ರಾಜ್ಯಗಳ ಗಡಿಭಾಗದ ಬ್ರಹ್ಮಪುತ್ರ ಉಪ ನದಿಯಲ್ಲಿ ಸಂಭವಿಸಿದೆ.
ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಸಾಡಿಯಾ ಎಂಬ ಚಾಪಕೋವ ಮೂಲದ ಮದ್ರಾಸ್ ರೆಜಿಮೆಂಟ್ ಟೆರಿಟೋರಿಯಲ್ ಸೈನ್ಯದಿಂದ 18 ಮಂದಿ ಯೋಧರು ಪ್ರಯಾಣಿಸುತ್ತಿದ್ದ ಜೀಪ್ ನದಿಗೆ ಬಿದ್ದಿದೆ. ಬಿದ್ದ ಪರಿಣಾಮ ಮೂವರು ಯೋಧರು ಮೃತಪಟ್ಟಿದ್ದಾರೆ. ಇವರಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯ ಒಬ್ಬ ಯೋಧ ಕೂಡ ಸೇರಿದ್ದಾರೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ರೋಣಿಹಾಳ ಗ್ರಾಮದ ಯೋಧ ಪರಸುರಾಮ ಖ್ಯಾತನ್ನವರ(32) ಮೃತ ಯೋಧ. ಇವರು 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಂತರ ಕೂಡಲೇ ಪೊಲೀಸ್ ಮತ್ತು ಸೇನೆಯವರು ರಕ್ಷಣಾ ಕಾರ್ಯಚರಣೆ ಮಾಡಿ 15 ಮಂದಿ ಯೋಧರನ್ನು ರಕ್ಷಿಸಿದ್ದಾರೆ. ಮೃತ ಮೂವರು ಯೋಧರಲ್ಲಿ ಒಬ್ಬರು ಇನ್ನು ಪತ್ತೆಯಾಗಿಲ್ಲ. ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಅವಘಡದಿಂದ ಗಾಯಗೊಂಡ ಸೈನಿಕರಲ್ಲಿ ನಾಲ್ವರನ್ನು ಚಿಕಿತ್ಸೆಗಾಗಿ ಚಾಪಕೋವಾ ಫಸ್ಟ್ ರೆಫರಲ್ ಘಟಕಕ್ಕೆ ರವಾನಿಸಲಾಗಿದೆ. (ವರದಿ: ಪಿ.ಎಸ್ )