ಸುದ್ದಿ ಸಂಕ್ಷಿಪ್ತ

ಏ.28 ರಂದು ‘ಸ್ವಾತಿ’ ಪೂಜೆ, ವಿಶೇಷ ಚಾಂದ್ರಮಾನ ಶ್ರೀ ಲಕ್ಷ್ಮೀನರಸಿಂಹ ಜಯಂತಿ

ಮೈಸೂರು,ಏ.24-ಮೈಸೂರು ನಗರದ ಜಯಲಕ್ಷ್ಮೀಪುರಂ, ಕಾಳಿದಾಸ ರಸ್ತೆಯಲ್ಲಿರುವ ಮೇಲುಕೋಟೆಯ ಯದುಗಿರಿ ಯತಿರಾಜ ಮಠದ ಶಾಖಾ ಮಠದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಏ.28 ರಂದು ‘ಸ್ವಾತಿ’ ವಿಶೇಷ ಪೂಜೆ ಹಾಗೂ ವಿಶೇಷ ಚಾಂದ್ರಮಾನ ಶ್ರೀ ಲಕ್ಷ್ಮೀನರಸಿಂಹ ಜಯಂತಿಯನ್ನು ಆಯೋಜಿಸಲಾಗಿದೆ.

ಶ್ರೀ ಶ್ರೀಯವರ ಆದೇಶಾನುಸಾರ ಅಂದು ಬೆಳಿಗ್ಗೆ 7.30ಕ್ಕೆ ಮಹಾ ಸುದರ್ಶನ ಸಂಕಲ್ಪ ಹೋಮ, ವಿಶೇಷ ಅಭಿಷೇಕ ಸೇವೆ, ಮಧ್ಯಾಹ್ನ 12.30ಕ್ಕೆ ಶ್ರೀಯವರಿಗೆ ವಿಶೇಷ ಅಲಂಕಾರ ಸೇವೆ, ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗವಿರುತ್ತದೆ. ಸಂಜೆ 7.30ಕ್ಕೆ ಪ್ರಾಕಾರೋತ್ಸವ, 8 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗವಿರುತ್ತದೆ. ಎಲ್ಲಾ ಭಕ್ತಾದಿಗಳು ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳಬಹುದು ಎಂದು ದೇವಸ್ಥಾನದ ವ್ಯವಸ್ಥಾಪಕರಾದ ಯೋಗಾನರಸಿಂಹನ್ (ಯೋಗು ಮಾಮ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ, ಎಂ.ಎನ್)

Leave a Reply

comments

Related Articles

error: