ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದು ಟ್ವಿಟರ್ ವಾರ್

ಬೆಂಗಳೂರು,ಏ.25-ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ಮೇಲೆ ಟ್ವಿಟರ್ ವಾರ್ ಶುರುಮಾಡಿದ್ದಾರೆ. ಬುಧವಾರ ತಮ್ಮ ಖಾತೆಯಿಂದ ಹಲವು ಟ್ವಿಟ್ ಗಳನ್ನು ಮಾಡಿ ಬಿಜೆಪಿ ನಾಯಕರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಜನಾರ್ಧನ ರೆಡ್ಡಿ ಹಾಗೂ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಟಾರ್ಗೆಟ್ ಮಾಡಿ ಟ್ವಿಟ್ ಮಾಡಿದ್ದಾರೆ. ಜನಾರ್ಧನ ರೆಡ್ಡಿ ಅವರು ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡ ಬಗ್ಗೆ ಕುಟುಕಿದ್ದಾರೆ. ಆದರೆ, ಬಿಜೆಪಿ ಇದುವರೆಗೂ ಈ ಟ್ವಿಟ್‌ಗೆ ಪ್ರತಿಕ್ರಿಯೆ ನೀಡಿಲ್ಲ.

ಬಿ.ಎಸ್.ಯಡಿಯೂರಪ್ಪ ಅವರು ಡಮ್ಮಿ ಅಭ್ಯರ್ಥಿ. ಬಿಜೆಪಿ ತನ್ನ ಪ್ರಚಾರಕ್ಕೆ ಉತ್ತರ ಭಾರತದ ನಾಯಕರಿಗಾಗಿ ಕಾದು ಕುಳಿತಿದೆ. ಉತ್ತರ ಭಾರತದಿಂದ ನಾಯಕರನ್ನು ಆಮದು ಮಾಡಿಕೊಳ್ಳಲು ಬಿಜೆಪಿ ಕಾಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕರೆತರುವ ಮೂಲಕ ರಾಜ್ಯದಲ್ಲಿ ನಾಯಕರು ಇಲ್ಲ ಎಂದು ಬಿಜೆಪಿ ಒಪ್ಪಿಕೊಂಡಿದೆ ಎಂದು ಟ್ವಿಟ್ ಮಾಡಿದ್ದಾರೆ.

ಈ ಟ್ವಿಟ್ ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಅರವಿಂದ ಲಿಂಬಾವಳಿ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದವರೇ?. ಇಲ್ಲವಾದಲ್ಲಿ ಅವರು ಇಟಲಿಯವರು ಎಂಬ ಕಟು ಸತ್ಯ ಒಪ್ಪಿಕೊಳ್ಳಿ ಎಂದಿದ್ದಾರೆ.

ರೆಡ್ಡಿ ಸಹೋದರರು 2008 ರಿಂದ 12ರ ತನಕ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರನ್ನು ಗೊಂಬೆ ತರಹ ಕುಣಿಸಿದರು. ರಾಜ್ಯವನ್ನು ಭ್ರಷ್ಟಚಾರದಲ್ಲಿ ನಂಬರ್ ಒನ್ ಮಾಡಿದರು ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಶನಿವಾರ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಅವರು ಹಿಂದಿಯಲ್ಲಿ ಟ್ವಿಟ್ ಮಾಡಿದ್ದರು. ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಟ್ವಿಟ್ ಮಾಡಿ, ಹಿಂದಿ ಬರೋಲ್ಲ ಎಂದು ಸಿದ್ದರಾಮಯ್ಯ ಕನ್ನಡದಲ್ಲಿ ಪ್ರತಿಕ್ರಿಯೆ ನೀಡಿ ನೆಟ್ಟಿಗರ ಗಮನ ಸೆಳೆದಿದ್ದರು. ಸಿದ್ದರಾಮಯ್ಯ ಪ್ರತಿಕ್ರಿಯಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. (ಎಂ.ಎನ್)

Leave a Reply

comments

Related Articles

error: