ಮೈಸೂರು

ಭ್ರಷ್ಟ ಅಧಿಕಾರಿಗಳಿಬ್ಬರನ್ನು ಅಮಾನತುಗೊಳಿಸಿದ ರಾಜ್ಯ ಸರಕಾರ

ಗುರುವಾರದಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದ ಇಬ್ಬರು ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಶುಕ್ರವಾರದಂದು ವಿಧಾನ ಪರಿಷತ್‍ನಲ್ಲಿ ಅಧಿಕಾರಿಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಪ್ರಾಧಿಕಾರದ ಯೋಜನಾ ವ್ಯವಸ್ಥಾಪಕ ನಿರ್ದೇಶಕ ಜಯಚಂದ್ರ, ಕಾವೇರಿ ನೀರಾವರಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಅವರ ಮನೆಗಳಲ್ಲಿ ಗುರುವಾರ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಎಲ್ಲ ಕಾರ್ಯಾಚರಣೆಯಲ್ಲಿ 6 ಕೋಟಿ ರೂ. ನಗದು, 7 ಕೆಜಿ ಚಿನ್ನದ ಗಟ್ಟಿ, 7 ಕೆಜಿ ಚಿನ್ನಾಭರಣ, ಐಷಾರಾಮಿ ಕಾರು, ಬೈಕ್‍ಗಳನ್ನು ಜಪ್ತಿ ಮಾಡಲಾಗಿತ್ತು.

ಜಯಚಂದ್ರ ಅವರು ಲೋಕೋಪಯೋಗಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‍.ಸಿ. ಮಹದೇವಪ್ಪ ಮತ್ತು ಚಿಕ್ಕರಾಯಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಎನ್ನಲಾಗಿದೆ.

Leave a Reply

comments

Related Articles

error: