ಮೈಸೂರು

ಸುಬ್ರಹ್ಮಣ್ಯ ಕ್ಷೇತ್ರದ 3ನೇ ವಾರ್ಷಿಕೋತ್ಸವ ಡಿ.5 ರಂದು

ತಪೋಭೂಮಿ ಟ್ರಸ್ಟ್ ವತಿಯಿಂದ ಡಿಸೆಂಬರ್ 5 ರಂದು ಸೋಮವಾರ ಸುಬ್ರಹ್ಮಣ್ಯ ಕ್ಷೇತ್ರದ 3ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಮುಖ್ಯಸ್ಥರಾದ ಸುಬ್ರಹ್ಮಣ್ಯ ಅವರು ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರ ಅಂಗವಾಗಿ ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಅನ್ನಸಂತರ್ಪಣೆಯು ಸಹ ಇರುತ್ತದೆ ಎಂದು ಹೇಳಿದರು.

ಅಲ್ಲದೇ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗಟ್ಟವಾಡಿ ರಸ್ತೆಯಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಕ್ಷೇತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಒಟ್ಟು 8 ಎಕರೆ ಜಾಗದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ 18 ಅಡಿ ಎತ್ತರದ ವಿಗ್ರಹವನ್ನು 2017 ರಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ನ ಪದಾಧಿಕಾರಿಗಳಾದ ಸುರೇಂದ್ರಕುಮಾರ್ ಖದ್ರಿ, ಲೋಕೇಶ್, ರೂಪಸುಬ್ರಹ್ಮಣ್ಯ ಇನ್ನಿತರರು ಹಾಜರಿದ್ದರು.

Leave a Reply

comments

Related Articles

error: