ಮೈಸೂರು

ಬಿ.ವೈ.ವಿಜಯೇಂದ್ರ ಟಿಕೆಟ್ ಕೈತಪ್ಪಿದ ಹಿನ್ನೆಲೆ: ಆತ್ಮಹತ್ಯೆಗೆ ಶರಣಾದ ಇಬ್ಬರು ಬಿಜೆಪಿ ಕಾರ್ಯಕರ್ತರು.?!

ಮೈಸೂರು,ಏ.26-ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ಇಬ್ಬರು ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗರ್ಗೇಶ್ವರಿ ಜಿ.ಪಂ ಕ್ಷೇತ್ರದ ಹೆಳವರಹುಂಡಿಯ ಗೂಳಪ್ಪ, ತಗಡೂರು ಜಿ.ಪಂ ಕ್ಷೇತ್ರದ ಸರಗೂರಿನ ಬಸವಣ್ಣ ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತರು.

ಪ್ರಾರಂಭದಿಂದಲೂ ವರುಣಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಅವರೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಅದರಂತೆ ಬಿ.ವೈ.ವಿಜಯೇಂದ್ರ ಅವರು ವರುಣಾದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಭರ್ಜರಿ ಪ್ರಚಾರ ಮಾಡಿದ್ದರು. ಬಿ.ವೈ.ವಿಜಯೇಂದ್ರ ಅವರೇ ಬಿಜೆಪಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗದಿದ್ದರೂ ವಿಜಯೇಂದ್ರ ನಾಮಪತ್ರ ಸಲ್ಲಿಸಲು ಮುಂದಾಗಿದ್ದರು. ಈ ವೇಳೆ ಬಿ.ಎಸ್.ಯಡಿಯೂರಪ್ಪ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ ಅಲ್ಲ ಎಂದು ಘೋಷಿಸಿದಾಗಿನಿಂದ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಇದೀಗ ಬಿಜೆಪಿ ಕಾರ್ಯಕರ್ತರ ಆಕ್ರೋಶ ತಾರಕ್ಕಕ್ಕೇರಿದ್ದು, ವರುಣಾ ಕ್ಷೇತ್ರದ ಇಬ್ಬರು ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (ಕೆ.ಎಸ್, ಎಂ.ಎನ್)

Leave a Reply

comments

Related Articles

error: