
ಮೈಸೂರು
ನಾರಾಯಣ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಎಂಡೊಸ್ಕೋಪಿಕ್ ಅಲ್ಟ್ರಾಸೌಂಡ್ ಆರಂಭ
ನಾರಾಯಣ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಡೈಜೆಸ್ಟಿವ್ ಕಾಯಿಲೆಗಳ ವಿಭಾಗವು ಎಂಡೊಸ್ಕೋಪಿಕ್ ಅಲ್ಟ್ರಾಸೌಂಡ್ ಅನ್ನು ಆರಂಭಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಈ ಘಟಕವನ್ನು ಉದ್ಘಾಟಿಸಿದರು.
ಶುಕ್ರವಾರದಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ನಾರಾಯಣ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೆ. ಸತೀಶ್ ರಾವ್ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಎಂಡೊಸ್ಕೋಪಿಕ್ ಅಲ್ಟ್ರಾಸೌಂಡ್ ಸಾಧನವು ರೋಗಿಗಳ ಕಾಯಿಲೆಯ ಬಗ್ಗೆ ವಿವರವಾದ ಚಿತ್ರಗಳೊಂದಿಗೆ ನಿಖರವಾದ ಮಾಹಿತಿ ನೀಡಲು ಸಹಕಾರಿಯಾಗಿದೆ ಎಂದರು.
ನಾರಾಯಣ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ನಿರ್ದೇಶಕ ನಿತಿನ್ ಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.