ಸುದ್ದಿ ಸಂಕ್ಷಿಪ್ತ

ಮತದಾನ ವೇತನ ಸಹಿತ ರಜೆ

ಮೈಸೂರು,ಏ.26-2018ರ ರಾಜ್ಯ ವಿಧಾನಸಭಾ ಚುನಾವಣೆ ಮೇ12 ರಂದು ನಡೆಯಲಿದೆ. ಅಂದು ಸರ್ಕಾರಿ ಹಾಗೂ ಶಾಲಾ ಕಚೇರಿಗಳು ಅನುದಾನಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಸರ್ಕಾರಿ ಕಾರ್ಖಾನೆಗಳು ಕೇಂದ್ರ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿಯಿಂದ ಸಂಘ ಸಂಸ್ಥೆಗಳು ಕೆಲಸ ನಿರ್ವಹಿಸುವ ಹಿನ್ನೆಲೆಯಲ್ಲಿ ಸದರಿ ಚುನಾವಣಾ ಕ್ಷೇತ್ರಗಳಲ್ಲಿನ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ವ್ಯಕ್ತಿಗಳಿಗೆ ಸೀಮಿತವಾದಂತೆ ಪ್ರಜಾ ಪ್ರತಿನಿಧಿ ಕಾಯ್ದೆ 1954 ರ ಸೆಕ್ಷನ್ 135 (ಬಿ) ರಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸುವಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರು/ಸಕ್ಷಮ ಪ್ರಾಧಿಕಾರಿಗಳಿಗೆ ಸೂಚಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: