ದೇಶಪ್ರಮುಖ ಸುದ್ದಿ

ಸುಪ್ರೀಮ್ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ‘ಇಂದು ಮಲ್ಹೋತ್ರಾ’ ಪ್ರಮಾಣ

ನವದೆಹಲಿ (ಏ.27): ಹಿರಿಯ ವಕೀಲರಾದ ‘ಇಂದು ಮಲ್ಹೋತ್ರಾ’ ಅವರು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ನೇರವಾಗಿ ನೇಮಕವಾಗಲಿರುವ ಮೊದಲ ಮಹಿಳೆ ಎಂಬ ಹಿರಿಮೆ ಇಂದು ಮಲ್ಹೋತ್ರಾ ಅವರದು.

‘ಇಂದು ಮಲ್ಹೋತ್ರಾ’ ಅವರನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂ ಶಿಫಾರಸು ಮಾಡಿತ್ತು. ಮಲ್ಹೋತ್ರಾ ಅವರ ನೇಮಕಕ್ಕೆ ಕೇಂದ್ರ ಸರ್ಕಾರ ಈಚೆಗಷ್ಟೇ ಅನುಮೋದನೆ ನೀಡಿತ್ತು.

ಪ್ರಸ್ತುತ ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿರುವ ಕೆ.ಎಂ. ಜೋಸೆಫ್‌ ಮತ್ತು ಹಿರಿಯ ವಕೀಲರಾದ ಇಂದು ಮಲ್ಹೋತ್ರಾ ಅವರ ಹೆಸರನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಪದನ್ನೋತಿಗಾಗಿ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿತ್ತು. ಆದರೆ, ಮಲ್ಹೋತ್ರಾ ಅವರ ಹೆಸರನ್ನು ಮಾತ್ರ ಕೇಂದ್ರ ಸರ್ಕಾರ ಅನುಮೋದಿಸಿತ್ತು. (ಎನ್.ಬಿ)

Leave a Reply

comments

Related Articles

error: