ಮೈಸೂರು

ಸುತ್ತೂರುಶ್ರೀ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯ ಪುಣ್ಯಾರಾಧನೆ ಡಿ.4ರಂದು

ಸುತ್ತೂರು ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳವರ 31ನೇ ಪುಣ್ಯಾರಾಧನೆಯನ್ನು ಹಮ್ಮಿಕೊಳ್ಳಲಾಗಿದೆ.

ಡಿ.4ರ ಭಾನುವಾರ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳಾದ ರುದ್ರಾಭಿಷೇಕ, ಸಹಸ್ರನಾಮಾರ್ಚನೆ ಜರುಗಲಿದೆ. ನಂತರ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಗಳ ಸಾನಿಧ್ಯದಲ್ಲಿ ಬೆಳಿಗ್ಗೆ 10 ಗಂಟೆಗೆ ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಮಂಟಪಗಳ ಭೂಮಿ ಪೂಜೆಯೂ ನೆರವೇರಲಿದ್ದು ಸಮಾರಂಭದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಾರ್ವಜನಿಕರು ಭಾಗಿಯಾಗುವರು ನಂತರ 10:30ಕ್ಕೆ ಜಾತ್ರೆ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಮಹಾಸಂಸ್ಥಾನ ಮಠದ ಆಡಳಿತಾಧಿಕಾರಿ ಎಸ್.ಶಿವಕುಮಾರಸ್ವಾಮಿ ತಿಳಿಸಿದ್ದಾರೆ.

Leave a Reply

comments

Related Articles

error: