ದೇಶ

ಕಪ್ಪುಹಣ ವಿನಿಮಯಕ್ಕೆ ಸಹಕಾರ: 27 ಬ್ಯಾಂಕ್ ಅಧಿಕಾರಿಗಳ ಅಮಾನತು

ನವದೆಹಲಿ: 500, 1000 ರೂ. ಮುಖಬೆಲೆಯ ನೋಟುಗಳ ರೂಪದಲ್ಲಿ ಸಂಗ್ರಹಿಸಿಡಲಾಗಿದ್ದ ಕಪ್ಪು ಹಣವನ್ನು ವಿನಿಮಯ ಮಾಡಿಕೊಳ್ಳಲು ಕಾಳಧನಿಕರಿಗೆ ನೆರವಾದ ಆರೋಪ ಸಂಬಂಧ ಸರಕಾರಿ ಸ್ವಾಮ್ಯದ ಬ್ಯಾಂಕುಗಳ  ಸುಮಾರು 27 ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರಿ ಇಬ್ಬರು ಸರಕಾರಿ ಇಂಜಿನಿಯರ್‍ಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಅಪಾರ ಪ್ರಮಾಣದ ಹೊಸ ನೋಟುಗಳನ್ನು ಅಕ್ರಮವಾಗಿ ದಾಸ್ತಾನಿಟ್ಟ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೇಂದ್ರ ಸರಕಾರ ಈ ಕ್ರಮ ಕೈಗೊಂಡಿದೆ.

ದೇಶದ ಹಲವೆಡೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಯಲ್ಲಿ ಹೊಸ ನೋಟುಗಳಿದ್ದ ಸುಮಾರು 5. 7 ಕೋಟಿ ರೂ. ಪತ್ತೆಯಾಗಿತ್ತು. ಭಾರತೀಯ ರಿಸರ್ವ್ ಬ್ಯಾಂಕ್ ಆದೇಶವನ್ನು ಮೀರಿ ಕೆಲ ಬ್ಯಾಂಕ್ ಅಧಿಕಾರಿಗಳು ಕಪ್ಪುಹಣವನ್ನು ವಿನಿಮಯ ಮಾಡಿಕೊಳ್ಳಲು ಸಹಾಯ ಮಾಡಿದ್ದಾರೆ. ಹಾಗಾಗಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆ ನೀಡಿದೆ.

ಅಕ್ರಮವಾಗಿ ಮಾಡಿರುವ ಕೆಲಸಗಳನ್ನು ಯಾವತ್ತೂ ಪ್ರೋತ್ಸಾಹಿಸಲಾಗುವುದಿಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಶಿಕ್ಷೆ ಖಚಿತ ಎಂದು ಹೇಳಿದೆ.

Leave a Reply

comments

Related Articles

error: