ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಪರ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರಂತೆ ನಟಿ ಜಯಮಾಲಾ

ಮೈಸೂರು,ಮೇ.2:- ರಾಜ್ಯ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಅದರಲ್ಲೂ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದು ಇಂದು ಪ್ರಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಚಂದನವನದ ತಾರೆಗಳು ಪ್ರಚಾರಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಜನರ ಮತವನ್ನು ತಮ್ಮತ್ತ ಸೆಳೆಯಲು ಮಾಸ್ಟರ್ ಪ್ಲಾನ್ ಮಾಡುತ್ತಿರುವ  ಪಕ್ಷದ ನಾಯಕರು ಪ್ರತಿಷ್ಠೆಯ ಕಣವಾದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿನಿಮಾ ತಾರೆಗಳ ಮೂಲಕ ಅಬ್ಬರದ ಪ್ರಚಾರ ನಡೆಸಲಿದ್ದಾರಂತೆ. ಹಿರಿಯ  ನಟ ನಟಿ ಯರಾದ ಜಯಮಾಲಾ,ಮುಖ್ಯಮಂತ್ರಿ ಚಂದ್ರು,ರಾಜೇಂದ್ರಸಿಂಗ್  ಬಾಬು ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮತ ಬೇಟೆ ನಡೆಸಲಿದ್ದಾರೆ ಎನ್ನಲಾಗಿದೆ. ಸಿದ್ಧಲಿಂಗಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಮತ ಕೇಳಲು ಚಿತ್ರ ನಟರು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದ್ದು, ಇಂದು ಎಲ್ಲರ ಚಿತ್ತ ಚಾಮುಂಡೇಶ್ವರಿ ಕ್ಷೇತ್ರದತ್ತ ಹರಿದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: