ಮೈಸೂರು

ವಿಷ್ಣುವರ್ಧನ್ ಸ್ಮಾರಕ ಉದ್ಭೂರು ಬಳಿ ಸ್ಥಾಪನೆಗೆ ನಿರ್ಧಾರ : ಅಭಿಮಾನಿಗಳಿಂದ ಸಂಭ್ರಮಾಚರಣೆ

ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗವಿರುವ ಡಾ.ವಿಷ್ಣುವರ್ಧನ್ ಉದ್ಯಾನವನದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಶನಿವಾರ ಸಿಹಿ ಹಂಚಿ ಸಂಭ್ರಮವನ್ನಾಚರಿಸಿದರು.

ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕವನ್ನು ಉದ್ಭೂರು ಗೇಟ್ ಬಳಿ ಸ್ಥಾಪಿಸಲು ಸರ್ಕಾರ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಈ ಸಂಭ್ರಮಾಚರಣೆಯನ್ನು ಕೈಗೊಳ್ಳಲಾಗಿತ್ತು. ಈ ಸಂದರ್ಭ ಉಪಸ್ಥಿತರಿದ್ದ ವಿಷ್ಣುವರ್ಧನ್ ಅಭಿಮಾನಿ ಜೋಗಿ ಮಂಜು ಮಾತನಾಡಿ ವಿಷ್ಣುವರ್ಧನ್ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸುತ್ತಿರುವುದು ಖುಷಿ ನೀಡಿದೆ. ವಿಷ್ಣುವರ್ಧನ್ ಅವರು ಕನ್ನಡಕ್ಕೆ ನೀಡಿದ ಕೊಡುಗೆ ಅಪಾರ ಎಂದರು. ವಿಷ್ಣುವರ್ಧನ್ ಅವರ ಉದ್ಯಾನವನದಲ್ಲಿ ಅವರ ಪುತ್ಥಳಿಯನ್ನೂ ನಿರ್ಮಿಸಿಕೊಡಬೇಕು. ವಿಷ್ಣುವರ್ಧನ್ ಸ್ಮಾರಕಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭ ಪಾತಿ ಪೌಂಡೇಶನ್ ಅಧ್ಯಕ್ಷೆ ಪಾತಿ, ವಿಕ್ರಂ, ಲಕ್ಷ್ಮಿದೇವಿ, ರಾಜೇಶ್, ಡಿ.ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: