ಮೈಸೂರು

ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರದಲ್ಲಿ ಸೋಲುತ್ತಾರೆ : ಮುರಳೀಧರ್ ರಾವ್

ಮೈಸೂರು,ಮೇ.2:- ಕರ್ನಾಟಕದ ಜಾತಿ ರಾಜಕೀಯ ಹಾಗೂ 2+1ಅಧಿಕಾರಕ್ಕೆ ತೆರೆಬೀಳಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ತಿಳಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಚಾಮರಾಜನಗರಕ್ಕೆ ಆಗಮಿಸಿದ್ದರು. ಅಲ್ಲಿ ಅವರಿಗೆ ಅಭೂತಪೂರ್ವ ಬೆಂಬಲ ದೊರಕಿದೆ. ಬಿಜೆಪಿ ಕರ್ನಾಟಕದಲ್ಲಿ ರೈತಪರ ಕಾರ್ಯಗಳನ್ನು ಮಾಡುವುದಕ್ಕಾಗಿ ಇಂದು ನರೇಂದ್ರ ಮೋದಿಯವರು ರೈತರ ಜೊತೆ ಸಂವಾದ ನಡೆಸಿದ್ದರು. ಕಾಂಗ್ರೆಸ್ ಆಡಳಿತದಲ್ಲಿ 3800ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಡಿಯೂರಪ್ಪರವರು ಅಧಿಕಾರಕ್ಕೆ ಬಂದ ನಂತರ ರೈತರ ಸಾಲಮನ್ನಾ ಮಾಡುವುದು ಬಿಜೆಪಿಯ ಅಜೇಂಡಾ ಆಗಿದೆ ಎಂದರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ಕಾಂಗ್ರೆಸ್ ನ್ನು ಕರ್ನಾಟಕದಿಂದ ಕಿತ್ತೊಗೆಯುವುದು ಖಚಿತ. ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ಕ್ಯಾಂಪೇನ್ ನಲ್ಲಿ ಸದೃಢವಾಗಿದೆ. ರಾಜನಾಥ ಸಿಂಗ್, ನಿತಿನ್ ಗಡ್ಕರಿ ರಾಜ್ಯ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಯಡಿಯೂರಪ್ಪ ಇದುವರೆಗೂ 100ಕ್ಕೂ ಹೆಚ್ಚು ಬಹಿರಂಗ ಸಭೆಗಳನ್ನು ನಡೆಸಿದ್ದಾರೆ. ಬಿಜೆಪಿಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕದ ಜಾತಿರಾಜಕೀಯ ಹಾಗೂ 2+1ಅಧಿಕಾರಕ್ಕೆ ತೆರೆಬೀಳಲಿದೆ. ಜೆಡಿಎಸ್ ಗೆ ಮತ ನೀಡಿದರೆ ಅದು ಕಾಂಗ್ರೆಸ್ ಗೆ ಮತ ನೀಡಿದಂತೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಮೈತ್ರಿ ಅಧಿಕಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ನ ದುರಾಡಳಿತವನ್ನು ಬಿಜೆಪಿ ತೊಲಗಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲಿನ ಭೀತಿಯಿಂದ ಬಾದಾಮಿಗೆ ಹೋಗಿದ್ದಾರೆ. ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರದಲ್ಲಿ ಸೋಲುತ್ತಾರೆ.ಇದರಲ್ಲಿ ಯಾವುದೇ ಸಂಶಯವಿಲ್ಲ. ಶ್ರೀರಾಮುಲು ಸಿದ್ದಾರಾಮಯ್ಯನವರಿಗೆ ಬಾದಾಮಿಯಲ್ಲಿ ಪ್ರಬಲ ಪೈಪೋಟಿ ನೀಡಿ ಅವರನ್ನು ಸೋಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ  ಬಿಜೆಪಿ ಪ್ರಮುಖರಾದ ತೇಜಸ್ವಿನಿ ಗೌಡ, ಡಾ.ಬಿ.ಮಂಜುನಾಥ್, ಹೆಚ್.ವಿ.ರಾಜೀವ್,  ಕೋಟೆ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: