ಪ್ರಮುಖ ಸುದ್ದಿ

ಬಿಜೆಪಿಯವರು ಸೋಲಿನ ಹತಾಶೆಯಲ್ಲಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ(ಹುಬ್ಬಳ್ಳಿ)ಮೇ.2:- ಬಿಜೆಪಿಯವರು ಸೋಲಿನ ಹತಾಶೆಯಲ್ಲಿದ್ದು, ನಮ್ಮ ಅಭ್ಯರ್ಥಿಗಳ ಮನೆಗಳ ಮೇಲೆ ಐಟಿ ದಾಳಿ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಯಡಿಯೂರಪ್ಪನವರಿಗೆ ಮತ್ತೆ ಜೈಲಿಗೆ ಹೋಗುತ್ತೇನೆಂಬ ಭಯ ಆವರಿಸಿದ್ದು, ಅದಕ್ಕಾಗಿ ನಾನೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿಗಳ ಮನೆಗಳ ಮೇಲೆ ಐಟಿ ದಾಳಿ ನಡೆದಿರುವುದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದರು. ಬಿಜೆಪಿ ನಾಯಕರಲ್ಲಿ ಒಗ್ಗಟ್ಟಿಲ್ಲ. ವರುಣಾದಲ್ಲಿ ವಿಜಯೇಂದ್ರ ಮನೆ ಮಾಡಿ ಪ್ರಚಾರ ಕೂಡ ಮಾಡಿದ್ದರು. ಆದರೆ ಟಿಕೇಟ್ ಸಿಕ್ಕಿಲ್ಲ. ಶೋಭಾಗೆ ಟಿಕೇಟ್ ಕೊಡಿಸೋದಿಕ್ಕೂ ಯಡಿಯೂರಪ್ಪನವರಿಗೆ ಸಾಧ್ಯವಾಗಿಲ್ಲ. ಪಕ್ಷದಲ್ಲಿ ಒಗ್ಗಟ್ಟಿದ್ದರೆ ವಿಜಯೇಂದ್ರಗೆ ಟಿಕೇಟ್ ತಪ್ಪುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು.ಕಾಂಗ್ರೆಸ್ ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ನಿರೀಕ್ಷೆಗೂ ಮೀರಿ ಜನರಿಂದ ಸ್ಪಂದನೆ ದೊರಕುತ್ತಿದೆ ಎಂದು ಹೇಳಿದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: