ಕರ್ನಾಟಕ

ಹಾರ್ಡ್ ವೇರ್ ಅಂಗಡಿಗೆ ಆಕಸ್ಮಿಕ ಬೆಂಕಿ : ವ್ಯಕ್ತಿ ದುರ್ಮರಣ

ಬೆಂಗಳೂರು,ಮೇ.: ಹಾರ್ಡ್‍ವೇರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಅಂಗಡಿ ಮಾಲೀಕನ ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿರುವ ಶಂಕರಾಚಾರ್ಯ ಎಂಬುವವರ ಮಾಲೀಕರಿಗೆ ಸೇರಿದ ರಾಜು ಹಾರ್ಡ್‍ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕ ಬೆಂಕಿ ತಗಲಿ  ಅಂಗಡಿಯಲ್ಲಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ರವಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅಂಗಡಿ ಮಾಲೀಕನ ಮಗ ರವಿಕುಮಾರ್ (17)ಮೃತಪಟ್ಟಿದ್ದಾನೆ. ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. (ಪಿ.ಎಸ್ )

Leave a Reply

comments

Related Articles

error: