ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ವಿರುದ್ದ ರೈತರಿಂದ ಜಾಗೃತಿ ಅಭಿಯಾನ

ಮೈಸೂರು,ಮೇ.3:- ಪ್ರತಿಷ್ಠಿತ ಕಣವಾದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಬ್ಬು ಬೆಳೆಗಾರರ ಸಂಘದಿಂದ ಜಾಗೃತಿ ಅಭಿಯಾನ ಆರಂಭಗೊಂಡಿದೆ.

ರೈತ ಮುಖಂಡರು ಸಿಎಂ  ಸಿದ್ದರಾಮಯ್ಯ ಹಾಗೂ ಸಚಿವ ಡಾ.ಹೆಚ್.ಸಿ.ಮಹದೇವಪ್ಪರನ್ನು ಸೋಲಿಸುವ ಗುರಿ ಹೊಂದಿದ್ದು, ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ವಿರುದ್ದ ರೈತರಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಗನ್ ಹೌಸ್ ಬಳಿಯಿಂದ ಜಾಗೃತಿ ಅಭಿಯಾನಕ್ಕೆ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ರೈತರ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಿಲ್ಲ.  ಅದಕ್ಕಾಗಿ ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದೇವೆ. ನಾಳೆ (ಮೇ 4) ರಂದು ತಿ. ನರಸೀಪುರದಲ್ಲಿ ಡಾ.ಹೆಚ್.ಸಿ. ಮಹದೇವಪ್ಪ ವಿರುದ್ದ ಜಾಗೃತಿ ಅಭಿಯಾನ ನಡೆಸುತ್ತೇವೆ ರೈತರ 15 ಪ್ರಣಾಳಿಕೆಯನ್ನು ಯಾರು ಬೆಂಬಲಿಸುತ್ತಾರೋ ಆ ಪಕ್ಷದ ಅಭ್ಯರ್ಥಿಗೆ ಮತ ಹಾಕಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಅಭಿಯಾನದಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: