ಮೈಸೂರು

ಕೃಷ್ಣ ಲಲಿತ ಕಲಾಮಂದಿರದ ವಾರ್ಷಿಕೋತ್ಸವ : ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮ

ಕೃಷ್ಣ ಲಲಿತಾ ಕಲಾಮಂದಿರ ಹಾಗೂ  ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಪ್ರೌಢಶಾಲೆಯ ವತಿಯಿಂದ 48 ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ  ಹಾಗೂ ಪೋಷಕರ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಮಾಜಿ ಮೇಯರ್ ವಿಶ್ವನಾಥ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ಶಾಲೆ ಸುಮಾರು 70 ವರ್ಷಗಳನ್ನು ಪೂರೈಸಿದೆ. ಬಡ ಮತ್ತು ಹಿಂದುಳಿದ ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ನೀಡುತ್ತಾ ಬಂದಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಯಾವ ಶಾಲೆಗಳಿಗೂ ಕಡಿಮೆ ಇಲ್ಲ ಎಂಬಂತೆ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಟ್ರಸ್ಟ್ ನ ಎಲ್ಲಾ ಸದಸ್ಯರು ಶ್ರಮಿಸುತ್ತಿದ್ದಾರೆ. ಈ ಶಾಲೆ ಇನ್ನೂ ಉತ್ತಮವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ವತಿಯಿಂದ ನಿವೃತ್ತ ಶಿಕ್ಷಕಿಯೋರ್ವರನ್ನು ಸನ್ಮಾನಿಸಿ, ಗೌರವಿಸಲಾಯಿತು.  ಅಂತರ ಶಾಲಾ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲೆಯ ಅಧ್ಯಕ್ಷ ಲಕ್ಷ್ಮೀನಾರಾಯಣ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಮೇಗೌಡ, ಶಾಲೆಯ ಕಮಿಟಿ ಅಧ್ಯಕ್ಷ ರಾಜೀ.ವಿ.ರಾಮನ್, ಕಾರ್ಯದರ್ಶಿ ಎಂ.ಸಿ.ಪ್ರಭಾಮಣಿ ಮತ್ತಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

 

 

 

 

 

Leave a Reply

comments

Related Articles

error: