ಮೈಸೂರು

ಸಿಎಂ ಸಿದ್ದರಾಮಯ್ಯ ಬೆಂಬಲಿಸಲು ನಾಯಕ ಸಮುದಾಯಕ್ಕೆ ಮನವಿ : ದ್ಯಾವಪ್ಪ ನಾಯಕ

ಮೈಸೂರು, ಮೇ.3 : ಪ್ರಸಕ್ತ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಯಕ ಸಮುದಾಯ ಬೆಂಬಲಿಸಬೇಕು ಎಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಶೋಷಿತ ಸಮುದಾಯಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯದ ಪರವಾದ ಆಡಳಿತ ನಡೆಸಿದ್ದಾರೆ. ಪರಿಶಿಷ್ಟ ಪಂಗಡ ಜನಾಂಗಕ್ಕೆ ಮೂಲಸೌಕರ್ಯ ಒದಗಿಸಲು ರಾಜ್ಯದಲ್ಲಿ ಟಿಎಸ್‌ಪಿ ಕಾಯ್ದೆ ಜಾರಿಗೊಳಿಸಿದರು. ಸಹಕಾರ ಸಂಘಗಳಲ್ಲಿ ನಮ್ಮ ಪಂಗಡಕ್ಕೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಿವಿಧ ಕಾಮಗಾರಿಗಳಿಗಾಗಿ ₹ 50 ಲಕ್ಷದವರೆಗೆ ಪ್ರತ್ಯೇಕ ಮೀಸಲಾತಿ ನೀಡಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಂಗಳೂರಿನ ಶಾಸಕರ ಭವನದ ಎದುರು ಮಹರ್ಷಿ ವಾಲ್ಮೀಕಿ ತಪೋವನ ಮತ್ತು ಪ್ರತಿಮೆ ನಿರ್ಮಾಣ ಮಾಡಿಸಿದ್ದಾರೆ. ಪರಿವಾರ ಮತ್ತು ತಳವಾರ ಸಮುದಾಯಗಳನ್ನು ಎಸ್‌ಟಿ ಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ನಾಯಕ ಜನಾಂಗದ 9 ಜನರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ನಮ್ಮ ಸಮುದಾಯದ ಅಭಿವೃದ್ಧಿಗೆ ನಾನಾ ಯೋಜನೆಗಳನ್ನು ರೂಪಿಸಿರುವ ಕಾಂಗ್ರೆಸ್‌ನ್ನು ಸಮುದಾಯ ಬೆಂಬಲಿಸಲಿದೆ ವಿಶ್ವಾಸ ವ್ಯಕ್ತಪಡಿಸಿದರು.

ವೇದಿಕೆ ನಗರಾಧ್ಯಕ್ಷ ರಾಜು, ರಾಜ್ಯ ಖಜಾಂಚಿ ಮಾದೇಶ್, ಸಂಚಾಲಕ ಕೆ.ಎಸ್.ಗಣೇಶ್, ಮಂಡ್ಯ ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: