ಕರ್ನಾಟಕ

ಬೀದಿ ನಾಟಕ ಮೂಲಕ ಮತದಾರರಲ್ಲಿ ಅರಿವು

ರಾಜ್ಯ(ಮಡಿಕೇರಿ)ಮೇ.4:- ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಟಕ ಮೂಲಕ ಮತದಾರರಲ್ಲಿ ಅರಿವು ಮೂಡಿಸಲಾಯಿತು.

ಸೋಮವಾರಪೇಟೆಯ ಕಕ್ಕೆಹೊಳೆ ಸಮೀಪದಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಜಾಗೃತಿ ಬೀದಿ ನಾಟಕದಲ್ಲಿ ರಾಜು ನೇತೃತ್ವದ ತಂಡದ ಸದಸ್ಯರು ಮತದಾನದ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: