ದೇಶ

ಪಾಕಿಸ್ತಾನದ ರಕ್ಷಣಾ ಸಚಿವರ ಮೇಲೆ ಗುಂಡಿನ ದಾಳಿ

ನವದೆಹಲಿ,ಮೇ 7-ಆಗಂತುಕನೊಬ್ಬ ಪಾಕಿಸ್ತಾನದ ರಕ್ಷಣಾ ಸಚಿವ ಅಹ್ಸಾನ್ ಇಕ್ಬಾಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.

ಸಚಿವರ ಬಲಗೈ ತೋಳಿಗೆ ಗುಂಡು ತಗುಲಿದ್ದು, ಅವರನ್ನು ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್ ಪ್ರಾಂತದ ತಮ್ಮ ತವರು ಜಿಲ್ಲೆ ನರೋವಾಲ್ನಲ್ಲಿ ರಾಜಕೀಯ ರ್ಯಾಲಿಯಲ್ಲಿ ಸಚಿವರು ಪಾಲ್ಗೊಂಡಿದ್ದ ವೇಳೆ ಘಟನೆ ನಡೆದಿದೆ.

ಇಕ್ಬಾಲ್ ಅವರನ್ನು ಗುರಿ ಮಾಡಿ ನಡೆದ ದಾಳಿಯಲ್ಲಿ ತೋಳಿಗೆ ಗುಂಡು ತಗುಲಿದೆ ಎಂದು ಆಪ್ತ ಸಹಾಯಕ ಅಸೀಮ್ ಖಾನ್ ಹೇಳಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಲಾಹೋರ್ಗೆ ಕರೆದೊಯ್ಯಲಾಗಿದೆ ಎಂದು ವಿವರಿಸಿದ್ದಾರೆ.

ದಾಳಿ ನಡೆಸಿದ್ದಾನೆ ಎನ್ನಲಾದ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 30 ಬೋರ್ ಪಿಸ್ತೂಲ್ನಿಂದ ದಾಳಿ ನಡೆದಿದ್ದು, 18 ಮೀಟರ್ ಅಂತರದಿಂದ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಇಮ್ರಾನ್ ಕಿಸ್ವರ್ ಹೇಳಿದ್ದಾರೆ.

ಘಟನೆ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಪಂಜಾಬ್ ಮುಖ್ಯಮಂತ್ರಿ ಶಹಬಾರ್ ಶರೀಫ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: