ಕರ್ನಾಟಕ

ಟೆಂಪೋ ಟ್ರಾವೆಲರ್ ಗೆ ಲಾರಿ ಡಿಕ್ಕಿ : ವ್ಯಕ್ತಿ ಸಾವು

ಬೆಂಗಳೂರು,ಮೇ.08: ಟೆಂಪೋ, ಲಾರಿ ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಲಕ್ಷ್ಮಣ್(35) ಮೃತ ದುರ್ದೈವಿ.  ಅತ್ತಿಬೆಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ  ಹೊಸೂರಿನತ್ತ ಹೊರಟಿದ್ದ ಖಾಸಗಿ ಕಂಪೆನಿಯ ಉದ್ಯೋಗಿಗಳಿದ್ದ ಟೆಂಪೋ  ಟ್ರಾವೆಲರ್ ಹೋಗುತ್ತಿತ್ತು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಲಾರಿ ವೇಗವಾಗಿ ಬಂದು ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಕ್ಷ್ಮಣ್ ಸ್ಥಳದಲ್ಲೇ ಸಾವನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರ.( ಪಿ.ಎಸ್ )

Leave a Reply

comments

Related Articles

error: