ಮೈಸೂರು

ಮತದಾರರ ಹೆಸರು ಎರಡು ಮೂರು ಕಡೆ ಇದ್ದು ಪರಿಶೀಲನೆ ನಡೆಸುವಂತೆ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿದ ಜಿ.ಟಿ.ದೇವೇಗೌಡ

ಮೈಸೂರು,ಮೇ.9:- ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಎರಡು ಮೂರು ಕಡೆ ಇದ್ದು ಈ ಕುರಿತು ಪರಿಶೀಲನೆ ನಡೆಸಬೇಕು ಎಂದು ಶಾಸಕ, ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ಜಿ.ಟಿ.ದೇವೇಗೌಡ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

215-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಕೆಲವು ಮತದಾರರ ಹೆಸರುಗಳು ಎರಡು ಮೂರು ಮತದಾರರ ಪಟ್ಟಿಯಲ್ಲಿದ್ದು, ಆ ವ್ಯಕ್ತಿಗಳು ಎರಡೂ ಕಡೆಯಲ್ಲಿಯೂ ಮತದಾನ ಮಾಡುತ್ತಿರುವುದಾಗ ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಮತದಾನ ಮಾಡುವಾಗ ಅಕ್ರಮ ನಡೆಯದಂತೆ ಕ್ರಮವಹಿಸಬೇಕೆಂದು ತಿಳಿಸಿದ್ದಾರೆ.

ದೊಡ್ಡ ಹುಂಡಿಯಲ್ಲಿರುವ ಮತದಾರರನೇಕರ ಹೆಸರು ಮತ್ತೆ ಜಯಪುರ ಬೂತ್ ನಲ್ಲೂ ಬಂದಿದೆ ಎಂದು ಆರೋಪಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: