ಮೈಸೂರು

ಕೆ.ಆರ್.ನಗರದಲ್ಲಿ ಕಾಂಗ್ರೆಸ್-ಜೆಡಿಎಸ್ ಕಿತ್ತಾಟ : ಇಬ್ಬರು ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

ಮೈಸೂರು,ಮೇ.10:- ಮತದಾನಕ್ಕಿನ್ನು ಎರಡೇ ದಿನಗಳು ಬಾಕಿ ಇರುವಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಕಿತ್ತಾಟಗಳು ಮುಂದುವರಿದಿದೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿನ ಕಾಮೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು  ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.‌ ಇಬ್ಬರು ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಪ್ರಚಾರ ಮಾಡುವ ವೇಳೆ ಗಲಾಟೆ ನಡೆದಿದ್ದು, ಹಲ್ಲೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಶಾಸಕ ಸಾ.ರಾ.ಮಹೇಶ್ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು,  ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಪುತ್ರ ಡಿ.ರವಿಶಂಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: