ಮೈಸೂರು

ಬೈಕ್ ಡಿಕ್ಕಿ :ಮಗು ಸಾವು

ಕೆ.ಆರ್.ನಗರದ ಪಿ.ಡಬ್ಲ್ಯೂ.ಡಿ ಕ್ವಾರ್ಟರ್ಸ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಗುವಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮೃತ ಕಂದಮ್ಮನನ್ನು ಇಂಚರ (1. ½) ಎಂದು ಗುರುತಿಸಲಾಗಿದೆ. ಮಗು ತನ್ನ ತಂದೆಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಪಲ್ಸರ್ ಬೈಕ್ ಮಗುವಿಗೆ ಡಿಕ್ಕಿ ಹೊಡೆದಿದೆ. ಮಗು ತೀವ್ರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದೆ.

ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: