ದೇಶಪ್ರಮುಖ ಸುದ್ದಿ

ಜಯಲಿತಾಗೆ ಹೃದಯಾಘಾತ: ಸನ್ನದ್ಧ ಸ್ಥಿತಿಯಲ್ಲಿ ದಂಗೆ ನಿಯಂತ್ರಣ ಪಡೆ

ಚೆನ್ನೈ: ಕಳೆದ ಎರಡು ತಿಂಗಳಿನಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಭಾನುವಾರ ಸಂಜೆ ಲಘು ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.

img-20161204-wa0028
ಆಸ್ಪತ್ರೆಗೆ ಧಾವಿಸಿ ಬಂದ ರಾಜ್ಯಪಾಲ ವಿದ್ಯಾಸಾಗರ್ ರಾವ್.

ನೌಕಾಪಡೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬೈಗೆ ತೆರಳಿದ್ದ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರು ವಿಷಯ ತಿಳಿಯುತ್ತಿದ್ದಂತೆಯೇ ಚೆನ್ನೈಗೆ ಧಾವಿಸಿ ಆಸ್ಪತ್ರೆಗೆ ಭೇಟಿ ನೀಡಿದರು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ತಮಿಳುನಾಡು ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಪರಿಸ್ಥತಿ ನಿಯಂತ್ರಿಸಲು ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದಿದ್ದಾರೆ.

ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿರುವ ಚೆನ್ನೈನಲ್ಲಿರುವ ಅಪೋಲೊ ಆಸ್ಪತ್ರೆಯ ಸುತ್ತ ಜಯಾ ಅವರ ಅಭಿಮಾನಿಗಳು ಜಮಾಯಿಸಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಆಸ್ಪತ್ರೆಯ ಬಳಿ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನೂ ನಿಯೋಜಿಸಲಾಗಿದ್ದು, ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ನಡೆಸಲಾಗುತ್ತಿದೆ.

ತಮಿಳುನಾಡು ಪೊಲೀಸ್ ಮಹಾನಿರ್ದೇಶಕರು ತುರ್ತು ಸಭೆ ನಡೆಸಿದ್ದು ಪರಿಸ್ಥಿತಿ ನಿಯಂತ್ರಣದ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಗೃಹ ಇಲಾಖೆಯು ತಮಿಳುನಾಡು ಮತ್ತು ನೆರೆ ರಾಜ್ಯಗಳಿಗೆ ಪರಿಸ್ಥಿತಿಯ ಸತತ ನಿಗಾ ವಹಿಸುವಂತೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಅಗತ್ಯ ಬಿದ್ದರೆ ಶಾಂತಿ ಪಾಲನೆಗಾಗಿ ಕೇಂದ್ರದ ದಂಗೆ ನಿಯಂತ್ರಣ ಪಡೆ ನಿಯೋಜಿಸಲು 9 ತುಕಡಿಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

img-20161204-wa0027
ಅಪೋಲೊ ಆಸ್ಪತ್ರೆಯ ಬಳಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಮುರಿದು ಒಳನುಗ್ಗುತ್ತಿರುವ ಅಣ್ಣಾ ಡಿಎಂಕೆ ಕಾರ್ಯಕರ್ತರು.

Leave a Reply

comments

Related Articles

error: