ದೇಶಪ್ರಮುಖ ಸುದ್ದಿ

ಸಿದ್ದು, ಬಿಎಸ್‍ವೈ ಇಬ್ಬರೂ ಮುಖ್ಯಮಂತ್ರಿಯಾಗಲ್ಲ: ಜೆಡಿಎಸ್ ಕಾರ್ಯದರ್ಶಿ ಡ್ಯಾನಿಶ್ ಅಲಿ

ನವದೆಹಲಿ (ಮೇ 14): ಕಾಂಗ್ರೆಸ್’ನ ಸಿದ್ದರಾಮಯ್ಯ ಅಥವಾ ಬಿಜೆಪಿಯ ಯಡಿಯೂರಪ್ಪ ಇಬ್ಬರಲ್ಲಿ ಯಾರೂ ಕೂಡ ಮುಂದಿನ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ, ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರು ಮುಂದಿನ ಸರ್ಕಾರವನ್ನು ತಾವೇ ರಚಿಸುವುದಾಗಿ ಹೇಳುತ್ತಿದ್ದಾರೆ. ನಾಳೆಯ ಫಲಿತಾಂಶದ ನಂತರ ಅವರಿಗೆ ತಮ್ಮ ತಪ್ಪಿನ ಅರಿವಾಗುತ್ತದೆ ಎಂದು ಹೇಳಿದ್ದಾರೆ.

ಮೇ 1ರ ರಂದು ಫಲಿತಾಂಶ ಪ್ರಕಟಗೊಂಡ ನಂತರ ತಾವು ನೀಡಿದ್ದ ಹೇಳಿಕೆಗಳನ್ನು ವಾಪಸ್ ತೆಗೆದುಕೊಳ್ಳಲಿದ್ದಾರೆ. ಕರ್ನಾಟಕ ಜನತೆ ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಬೇಕೆಂದು ಬಯಸಿದ್ದಾರೆ ಎಂದರು.

ಕುಮಾರಸ್ವಾಮಿ ಜೆಡಿಎಸ್’ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಮೇ 12 ರಂದು ರಾಜ್ಯ ವಿಧಾನ ಸಭೆಗೆ ಚುನಾವಣೆ ನಡೆದಿದ್ದು ಮೇ 15ರಂದು ಫಲಿತಾಂಶ ಹೊರಬೀಳಲಿದೆ. ಚುನಾವಣೋತ್ತರ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿರುವ ಕಾರಣ ರಾಜಕೀಯ ನಾಯಕರು ತಮ್ಮದೇ ಆದ ವಿಭಿನ್ನ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. (ಎನ್.ಬಿ)

Leave a Reply

comments

Related Articles

error: