ದೇಶಪ್ರಮುಖ ಸುದ್ದಿ

ಉತ್ತರ ಭಾರತದಲ್ಲಿ ಧೂಳು ಬಿರುಗಾಳಿ, ಮಳೆಯ ಆರ್ಭಟಕ್ಕೆ 61 ಬಲಿ: ದಕ್ಷಿಣಕ್ಕೂ ಎಚ್ಚರಿಕೆ ರವಾನೆ

ನವದೆಹಲಿ (ಮೇ 14): ಉತ್ತರ ಭಾರತದಲ್ಲಿ ಧೂಳು ಸಹಿತ ಭಾರೀ ಬಿರುಗಾಳಿ, ಗುಡುಗು-ಸಿಡಿಲಿನ ಧಾರಾಕಾರ ಮಳೆಗೆ ಬಲಿಯಾದವರ ಸಂಖ್ಯೆ 61ಕ್ಕೇರಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ.

ಉತ್ತರ ಪ್ರದೇಶ ರಾಜ್ಯವೊಂದರಲ್ಲೇ 39 ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಹಲವಾರು ಪ್ರಾಣಿಗಳೂ ಸಹ ಸಾವಿಗೀಡಾಗಿದ್ದು, ಹತ್ತಾರು ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಕೆಲವು ಮನೆಗಳು ಕುಸಿದಿವೆ. ಪಶ್ಚಿಮ ಬಂಗಾಳದಲ್ಲಿ ಪ್ರಕೃತಿ ವಿಕೋಪಕ್ಕೆ 12 ಮಂದಿ ಬಲಿಯಾಗಿದ್ದಾರೆ. ಆಂಧ್ರಪ್ರದೇಶದಲ್ಲಿಯೂ 9 ಜನರು ಅಸುನೀಗಿದ್ದಾರೆ.

ದೆಹಲಿಯಲ್ಲೂ 11 ಮಂದಿ ಮರಣ ಹೊಂದಿದ್ದಾರೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರ್ನಾಟಕ, ಹಿಮಾಚಲ ಪ್ರದೇಶ, ಉತ್ತರಖಾಂಡ್, ಪಂಜಾಬ್, ಹರಿಯಾಣ, ಚಂಡಿಗಢ, ಮಧ್ಯಪ್ರದೇಶ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ಮಹಾರಾಷ್ಟ್ರ, ಕೇರಳ, ತಮಿಳುನಾಡಿನ ಕೆಲವು ಭಾಗಗಳಲ್ಲೂ ಮಳೆಯಾಗಿಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. (ಎನ್.ಬಿ)

Leave a Reply

comments

Related Articles

error: