ಕರ್ನಾಟಕಮೈಸೂರು

ಜನ್ಮ ಶತಮಾನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಜೆ.ಪಿ. ನಗರದ ವಿವಿಧ ಸಂಘ ಸಂಸ್ಥೆಗಳು, ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆಗಳು, ಸಂಸ್ಥೆ ನೌಕರರು, ಗುರೂರು ಹಾಗೂ ಗೆಜ್ಜಗಳ್ಳಿ ಗ್ರಾಮಸ್ಥರ ಸಹಯೋಗದೊಂದಿಗೆ ಆಯೋಜಿಸಲಾಗಿದೆ.

ಸೆ.11ರ ಭಾನುವಾರ ಬೆಳಿಗ್ಗೆ 11:30ಕ್ಕೆ ಜೆ.ಎಸ್.ಎಸ್. ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದ್ದು ಲೋಕಸಭಾ ಸದಸ್ಯ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು,  ಜಗದ್ಗುರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಗಳು ಸಾನಿಧ್ಯ ವಹಿಸುವರು. ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠದ ಅಭಿನವ ವಾಗೀಶ ಬ್ರಹ್ಮತಂತ್ರ ಸ್ವತಂತ್ರ ಸ್ವಾಮಿಗಳು ಉಪಸ್ಥಿತರಿರುವರು, ಸಂಸದ ಪ್ರತಾಪ್ ಸಿಂಹ ಪ್ರತಿಭಾ ಪುರಸ್ಕಾರ ನೆರವೇರಿಸುವರು. ಶಾಸಕ ಎಂ.ಕೆ. ಸೋಮಶೇಖರ್, ಮಾಜಿ ಸಚಿವ ರಾಮದಾಸ್, ನಗರಪಾಲಿಕೆ ಸದಸ್ಯೆ ಉಮಾಮಣಿ ಮಹದೇವ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜನ್ಮಶತಮಾನೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾದ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಉದ್ಯಮಿಗಳಾದ ಯು.ಎಸ್. ಶೇಖರ್ ಮತ್ತು ರಾಜೀವ್ ಉಪಸ್ಥಿತರಿರುವರು.

Leave a Reply

comments

Related Articles

error: