ದೇಶ

ಸುನಂದಾ ಪುಷ್ಕರ್ ಪ್ರಕರಣ: ಪತಿ ಶಶಿ ತರೂರ್ ವಿರುದ್ಧ ಚಾರ್ಜ್‌ಷೀಟ್‌

ನವದೆಹಲಿ,ಮೇ 14: ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಪತಿ, ಕಾಂಗ್ರೆಸ್ ಸಂಸದ ಶಶಿ ತರೂರ್‌ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿ ಪೊಲೀಸರು ಚಾರ್ಜ್‌ಷೀಟ್ ಸಲ್ಲಿಸಿದ್ದಾರೆ.

ಸುನಂದಾ ಪುಷ್ಕರ್ ಅವರು 2014ರ ಜನವರಿ 17ರಂದು ದಕ್ಷಿಣ ದೆಹಲಿಯ ಲೀಲಾ ಹೋಟೆಲ್‌ನ 345ನೇ ರೂಮ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದರು. ನಾಲ್ಕು ವರ್ಷದ ನಂತರ  ನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸುನಂದಾ ಪುಷ್ಕರ್‌  ಕೊಲೆಯಲ್ಲ ,  ಆತ್ಮಹತ್ಯೆ ವಿನಾ ಎಂದು ಪಾಟಿಯಾಲ ಹೌಸ್ ಕೋರ್ಟ್‌ನ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಧರ್ಮೇಂದರ್ ಸಿಂಗ್ ಅವರಿಗೆ ಚಾರ್ಜ್‌ಷೀಟ್‌ಅನ್ನು ಸಲ್ಲಿಸಲಾಗಿದೆ.

ಪೊಲೀಸರು ತಮ್ಮ ಅಂತಿಮ ವರದಿಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ಮತ್ತು 498ಎ ಅಡಿಯಲ್ಲಿ ಶಶಿ ತರೂರ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಪತ್ನಿ ಮೇಲಿನ ಕ್ರೌರ್ಯದ ಆರೋಪಗಳನ್ನು ಹೊರಿಸಿದ್ದಾರೆ. ತರೂರ್‌ ಅವರನ್ನು ಶಂಕಿತ ಎಂದು ಎರಡನೆಯ ಕಾಲಂನಲ್ಲಿ ನಮೂದಿಸಲಾಗಿದೆ.  ಮೇ 24ರಂದು ಕೋರ್ಟ್‌ ಚಾರ್ಜ್‌ಷೀಟ್‌ ಸಂಬಂಧ ವಿಚಾರಣೆ ಕೈಗೊಳ್ಳುವ ಸಾಧ್ಯತೆಯಿದೆ.  ( ಪಿ.ಎಸ್ )

Leave a Reply

comments

Related Articles

error: