
ಪ್ರಮುಖ ಸುದ್ದಿ
ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವು
ರಾಜ್ಯ(ಬದಾಮಿ)ಮೇ.15:- ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಮೂರು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿ ಮತ್ತು ಬದಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಎರಡು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ವಿಜಯ ಸಾಧಿಸಿದ್ದಾರೆ. (ಕೆ.ಎಸ್,ಎಸ್.ಎಚ್)