ಮೈಸೂರು

ಸಾರಿಗೆ ಬಸ್ ಮತ್ತು ಕಾರ್ ನಡುವೆ ಡಿಕ್ಕಿ

ಮೈಸೂರು,ಮೇ.16:- ಮೈಸೂರು ಹುಣಸೂರು ರಸ್ತೆಯ ಬಿಳಿಕೆರೆಯಲ್ಲಿ ಸಾರಿಗೆ ಬಸ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ  ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ಹಾಗೂ ಕಾರು ಅಲ್ಪಮಟ್ಟಿಗೆ ಹಾನಿಗೊಳಗಾಗಿದೆ ಎನ್ನಲಾಗಿದೆ. ಸಾರಿಗೆ ಬಾಸ್ ಚಾಲಕನ ಬೇಜವಾಬ್ದಾರಿಯಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: