
ಕರ್ನಾಟಕಪ್ರಮುಖ ಸುದ್ದಿ
ಮೇ 17 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ: ಬಿಎಸ್ವೈ
ಬೆಂಗಳೂರು,ಮೇ 16-ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾನು ನಾಳೆ (ಮೇ 17) ರಂದು ಪ್ರಯಾಣವಚನ ಸ್ವೀಕರಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಯಡಿಯೂರಪ್ಪ ಆಯ್ಕೆಯಾದ ಬಳಿಕ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಆದರೆ ರಾಜ್ಯಪಾಲರು ಇದುವರೆಗೂ ಸರ್ಕಾರ ರಚನೆಗೆ ಆಹ್ವಾನ ನೀಡಿಲ್ಲ.
ಈ ಮಧ್ಯೆ, ಗುರುವಾರ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಮತ್ತು ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುತ್ತೇನೆ ಎಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಣೆಬೆನ್ನೂರಿನಿಂದ ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿರುವ ಆರ್.ಶಂಕರ್ ಅವರು ಸಹ ಬಿಜೆಪಿಗೆ ಬೆಂಬಲ ನೀಡಿದ್ದು, ಯಡಿಯೂರಪ್ಪ ಅವರು ಕೆಪಿಜೆಪಿಯ ಶಂಕರ್ ಸೇರಿದಂತೆ ಒಟ್ಟು 105 ಶಾಸಕರ ಬೆಂಬಲ ಪತ್ರ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಅಸಮಾಧಾನವಿರುವ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿ ಬೆಂಬಲಿಸಲು ಸಿದ್ಧರಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಹೇಳಿದ್ದಾರೆ. (ಎಂ.ಎನ್)