ಮೈಸೂರು

ಡಿ.10: ಉಚಿತ ಹೃದಯ ತಪಾಸಣೆ

ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಉಚಿತ ಹೃದಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹೆಚ್.ವಿ.ಗಣೇಶ್ ಹೇಳಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಣೇಶ್,  ಡಿ.10 ರಿಂದ ಪ್ರತಿ ತಿಂಗಳು ಎರಡನೇ ಶನಿವಾರ ನೌಕರರ ಭವನದಲ್ಲಿ ಬೆಳಿಗ್ಗೆ10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಪಾಸಣಾ ಶಿಬಿರ ನಡೆಯಲಿದ್ದು, ಒಂದೊಂದು ತಿಂಗಳು ಒಂದೊಂದು ರೋಗದ ಬಗ್ಗೆ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9538052378 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಬೋಜೇಗೌಡ,ಸಂದೀಪ್ ಮತ್ತು ಕಾವೇರಮ್ಮ ಉಪಸ್ಥಿತರಿದ್ದರು.

Leave a Reply

comments

Related Articles

error: