ಮೈಸೂರು

ವಿವಿಪ್ಯಾಟ್ ದುರುಪಯೋಗದ ಆರೋಪ : ಪ್ರತಿಭಟನೆ

ಮೈಸೂರು,ಮೇ.16:- ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿ ಪ್ಯಾಟ್ ಗಳು ದುರುಪಯೋಗವಾಗಿವೆ ಎಂದು ಆರೋಪಿಸಿ ಎಸ್ ಡಿಪಿಐ ಪ್ರತಿಭಟನೆ ನಡೆಸಿದೆ.

ಜಿಲ್ಲಾಧಿಕಾರಿಗಳ ಕಚೇರಿ ಬಳಿಯಿಂದು ನೂರಾರು ಎಸ್ಡಿಪಿಐ ಕಾರ್ಯಕರ್ತರು ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ವಿವಿ ಪ್ಯಾಟ್ ಗಳನ್ನು ಹ್ಯಾಕ್ ಮಾಡಲಾಗಿದೆ. ಕೆಲ ಪಕ್ಷಗಳು ನ್ಯಾಯ ಸಮ್ಮತ ಚುನಾವಣೆ ನಡೆಸದೆ ಅಕ್ರಮವೆಸಗಿವೆ. ಈ ಕೂಡಲೇ ಎನ್.ಆರ್.ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಅನುವು ಮಾಡಿಕೊಡುವಂತೆ  ಒತ್ತಾಯಿಸಿದರು. ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನೂರಾರು ಮಂದಿ ಎಸ್ ಡಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: