ಕರ್ನಾಟಕಮೈಸೂರು

ದಿ ಮೈಸೂರು ಸಿಟಿ ಗಾಂಧಿನಗರ ಆದಿಕರ್ನಾಟಕದ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ

ದಿ ಮೈಸೂರು ಸಿಟಿ ಗಾಂಧಿನಗರ ಆದಿಕರ್ನಾಟಕದ ಅಭಿವೃದ್ಧ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 12ರ ಭಾನುವಾರದ ಸಂಜೆ 4:30ಕ್ಕೆ ಸಂಘದ ಸಮುದಾಯ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೈಸೂರು ಪ್ರಾಂತ್ಯದ ಸಹಕಾರ ಸಂಘಗಳ ಸಂಯುಕ್ತ ನಿಬಂಧಕ ಹೆಚ್.ಪಿ.ಜೋಷಿ ಉದ್ಘಾಟಿಸುವರು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಖಾತೆ ಸಚಿವ ತನ್ವೀರ್ ಸೇಠ್ ಅಧ್ಯಕ್ಷತೆ ವಹಿಸುವರು, ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಎನ್.ರಾಜು, ಅರಗು ಮತ್ತು ಬಣ್ಣದ ಕಾರ್ಖಾನೆ ಪ್ರಧಾನ ವ್ಯವಸ್ಥಾಪಕ ಸಿ.ಹರ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ರಾಜ್ಯ ವಯಸ್ಕರ ಶಿಕ್ಷಣ ಸಮಿತಿ ಮಾಜಿ ಅಧ್ಯಕ್ಷ ದೇವನೂರು ಶಿವಮಲ್ಲು, ಪಾಲಿಕೆ ಸದಸ್ಯರಾದ ರವೀಂದ್ರ ಕುಮಾರ್ ಮತ್ತು ಕಮಲ ಉದಯ್ ಕುಮಾರ್ ಉಪಸ್ಥಿತರಿರುವರು.

Leave a Reply

comments

Related Articles

error: