ಮೈಸೂರು

ಭಾರತದಲ್ಲಿ ಪ್ರಜಾಪ್ರಭುತ್ವ ಉಳಿದಿದೇಯಾ ? ನಾಳೆ ವಿಚಾರಗೋಷ್ಠಿ

ಮೈಸೂರು,ಮೇ.17 : ವಿದ್ಯಾವರ್ಧಕ ಕಾನೂನು ಕಾಲೇಜಿನಿಂದ ಸಂಸ್ಥೆಯ ಸಂಸ್ಥಾಪಕರಾದ ದಿ.ಕೆ.ಪುಟ್ಟಸ್ವಾಮಿಯವರ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಮೇ.18ರ ಬೆಳಗ್ಗೆ 10.30ಕ್ಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದೆ ಎಂದು ಪ್ರಾಂಶುಪಾಲ ಪ್ರೊ.ಕೆ.ವಿ.ವಾಸುದೇವ್ ತಿಳಿಸಿದರು.

ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ದಿ.ಪುಟ್ಟಸ್ವಾಮಿಯವರು 1952ರಲ್ಲಿ ಶ್ರೀರಂಗಪಟ್ಟಣದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದು ನಿರಂತರವಾಗಿ 7 ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸೋಲಿಲ್ಲದ ಸರದಾರರಂತೆ ಇದ್ದರು. ಅವರ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಿದೆ ಎಂದರು.

ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆಯವರು  ಭಾರತದ ಪ್ರಜಾಪ್ರಭುತ್ವದಲ್ಲಿ ಏನು ಉಳಿದಿದೆ? ವಿಷಯವಾಗಿ ಉಪನ್ಯಾಸ ನೀಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗುಂಡಪ್ಪ ಗೌಡ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಬೆಂಗಳೂರಿನ ಎನ್.ಎಲ್. ಎಸ್.ಐ ಯು ಕಾಲೇಜಿನ ಡಾ.ಎಂ.ಕೆ.ರಮೇಶ್ ಭಾಗಿಯಾಗಲಿದ್ದು. ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಎಸ್.ಎನ್.ಲಕ್ಷ್ಮೀನಾರಾಯಣ ಇರುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೋಷ್ಠಿಯಲ್ಲಿ ಪ್ರೊ.ಬೋರೇಗೌಡ, ಪ್ರೊ.ಎಂ.ಸಿ.ರಾಜೇಶ್ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: