ಮೈಸೂರು

ಆತ್ಮತೃಪ್ತಿ ಮತ್ತು ಮಾನವೀಯತೆ ಬೆಳೆಸಿಕೊಳ್ಳಲು ಎನ್.ಸೋತೋಷ್ ಹೆಗ್ಡೆ ಕರೆ

ಮೈಸೂರು,ಮೇ.18:- ವಿದ್ಯಾರ್ಥಿಗಳು ಆತ್ಮತೃಪ್ತಿ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳುವಂತೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಕರೆ ನೀಡಿದರು.

ಮೈಸೂರಿನ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿಂದು ಆಯೋಜಿಸಲಾದ ‘ಭಾರತದ ಪ್ರಜಾಪ್ರಭುತ್ವದಲ್ಲಿ ಏನಿದೆ?’ವಿಷಯ ಕುರಿತ ಉಪನ್ಯಾಸದಲ್ಲಿ ಪಾಲ್ಗೊಂಡುಉಪನ್ಯಾಸ ನೀಡಿದರು. ನೀವು ನಡೆಸುವ ನಿಮ್ಮ ವೃತ್ತಿ ಜೀವನದಲ್ಲಿ ತೃಪ್ತಿಯಿಟ್ಟುಕೊಳ್ಳಬೇಕು. ಆತ್ಮವಿಶ್ವಾಸದೊಂದಿಗೆ ಕಾರ್ಯನಿರ್ವಹಿಸಬೇಕು. ಈಗ ಪ್ರಜಾಪ್ರಭುತ್ವದಲ್ಲಿ ಹಲವಾರು ಬದಲಾವಣೆಗಳಾಗಿದೆ. ಮೊದಲೆಲ್ಲ. ಯಾವುದೇ ಕಪ್ಪು ಚುಕ್ಕೆಗಳಿಲ್ಲದ, ಯಾವುದೇ ಪ್ರಕರಣದಲ್ಲಿ ಸಿಲುಕದ ವ್ಯಕ್ತಿಗಳು ಜನಪ್ರತಿನಿಧಿಗಳಾಗಿ ಆಯ್ಕೆಯಾಗುತ್ತಿದ್ದರು. ಆದರೆ ಇಂದು ಜಾಮೀನು ರಹಿತ, ಜಾಮೀನು ಸಹಿತ ಪ್ರಕರಣಗಳಲ್ಲಿ ಸಿಲುಕಿಕೊಂಡವರೇ ಜನಪ್ರತಿನಿಧಿಗಳಾಗುತ್ತಿದ್ದಾರೆ. ಅದಕ್ಕಾಗಿ ನಮ್ಮ ಭವಿಷ್ಯವನ್ನು ಉಜ್ವಲಗೊಳಿಸುವತ್ತ ನಾವು ಹೆಜ್ಜೆ ಇಡಬೇಕಾಗಿದೆ. ಕಷ್ಟ ಸುಖಗಳಿಗೆ ಸ್ಪಂದಿಸುವ ಮನೋಭಾವದೊಂದಿಗೆ ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ವಾಸುದೇವ್, ಕಾನೂನು ಪ್ರಾಧ್ಯಾಪಕ ಎಂ.ಕೆ.ರಮೇಶ್, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಲಕ್ಷ್ಮಿನಾರಾಯಣ, ಸಂಘದ ಗೌರವಾಧ್ಯಕ್ಷ ಗುಂಡಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: