Uncategorized

ಬಿಎಸ್‍ವೈ ಸರ್ಕಾರ ವಿಶ್ವಾಸಮತ ಯಾಚನೆಯಲ್ಲಿ ಯಶಸ್ವಿಯಾಗುತ್ತದೆ: ಶೋಭಾ ಕರಂದ್ಲಾಜೆ

ಬೆಂಗಳೂರು (ಮೇ 18): ಸುಪ್ರೀಂಕೋರ್ಟ್ ತ್ರಿಸದಸ್ಯ ನ್ಯಾಯಪೀಠವು ನಾಳೆ ಸಂಜೆ 4 ಗಂಟೆಗೆ ಯಡಿಯೂರಪ್ಪ ಸರ್ಕಾರ ವಿಶ್ವಾಸಮತ ಯಾಚಿಸಬೇಕು ಎಂಬ ತೀರ್ಪು ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರು, ವಿಶ್ವಾಸಮತ ಸಾಬೀತುಪಡಿಸುವ ಕುರಿತು ಭರವಸೆ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಬಿಜೆಪಿಯು ಬಹುಮತ ಸಾಬೀತುಪಡಿಸಿ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರ ನಡೆಸುತ್ತೆ. ತಮಗೆ ಈಗಾಗಲೇ 120 ಸದಸ್ಯರ ಬೆಂಬಲವಿದೆ. ಯಡಿಯೂರಪ್ಪ ಸರ್ಕಾರವು ವಿಶ್ವಾಸಮತ ಯಾಚನೆಯಲ್ಲಿ ಯಶಸ್ವಿಯಾಗುತ್ತದೆ ಎಂದು ಅವರು ಹೇಳಿದ್ದಾರೆ. (ಎನ್.ಬಿ)

Leave a Reply

comments

Related Articles

error: