ಮೈಸೂರು

ಮುಡಾ ಅಸಿಸ್ಟೆಂಟ್ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ : ಅಕ್ರಮ ದಾಖಲೆ ವಶ

enjineer-webಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಇಂಜಿನಿಯರ್ ಮಹೇಶ್ ಅವರಿಗೆ ಎಸಿಬಿ ಪೊಲೀಸ್ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ.  ಅವರ ಮನೆ ಮೇಲೆ  ಎಸಿಬಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟ ಅಪಾರ ಪ್ರಮಾಣದ ದಾಖಲೆಗಳನ್ನು ಹಾಗೂ ಚಿನ್ನಾಭರಣಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಖಚಿತ ಮಾಹಿತಿ ಮತ್ತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ವಿಜಯನಗರದ 1ನೇ ಹಂತ, ನಾಲ್ಕನೇ ಕ್ರಾಸ್, ಮನೆ.ನಂ.325  ಮುಡಾ ಸಹಾಯಕ ಇಂಜಿನಿಯರ್ ಮಹೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕೆಲವು ಲೇಔಟ್ ಹಾಗೂ ಅಕ್ರಮ ಜಾಗಗಳ ದಾಖಲೆ ಪತ್ರಗಳನ್ನು, ಹಾಗೂ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಅವರ ಮನೆಯಲ್ಲಿ ಹಳೆಯ ಹಾಗೂ ಹೊಸ ನೋಟುಗಳು ಪತ್ತೆಯಾಗಿದ್ದು, ಅಂದಾಜು ಕೋಟ್ಯಾಂತರ ರೂ. ಇರಬೇಕೆಂದು ಬಲ್ಲ ಮೂಲಗಳು ತಿಳಿಸಿವೆ.

ದಾಳಿಯಲ್ಲಿ ಎಸಿಬಿ ಪೊಲೀಸ್ ಅಧೀಕ್ಷಕಿ  ಕವಿತಾ ನೇತೃತ್ವದಲ್ಲಿ ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಇನ್ಸಪೆಕ್ಟರ್ ಅನಿಲ್ ಕುಮಾರ್ ಮತ್ತಿತರ ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave a Reply

comments

Related Articles

error: