ಸುದ್ದಿ ಸಂಕ್ಷಿಪ್ತ
ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯ
ಮೈಸೂರು,ಮೇ.21 : ಕೆ.ಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಚಾಮುಂಡೇಶ್ವರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಶಿವಣ್ಣ ಒತ್ತಾಯಿಸಿದ್ದಾರೆ.
ಡಾ.ಪರಮೇಶ್ವರ ಅವರು ಪಕ್ಷಕ್ಕೆ ನಿಷ್ಠಾವಂತರಾಗಿ ಹಲವಾರು ವರ್ಷಗಳಿಂದಲೂ ದುಡಿದಿದ್ದಾರೆ.2013ರಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದರು ಅವರ ಸೋಲಿನಿಂದ ಉಪಮುಖ್ಯಮಂತ್ರಿ ಸ್ಥಾನದಿಂದ ವಂಚಿತರಾಗಿದ್ದರು, ಆದ್ದರಿಂದ 2018ರಲ್ಲಿ ಅಧಿಕಾರಕ್ಕೆ ಬರುತ್ತಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದಿದ್ದಾರೆ. (ಕೆ.ಎಂ.ಆರ್)